ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇದರ ವತಿಯಿಂದ ದಿನಾಂಕ 20-07-2024ರಂದು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಶೈಕ್ಷಣಿಕ ಸಾಧನೆಯನ್ನು ಮಾಡಿದ ಸ್ಕೌಟ್ಸ್, ಗೈಡ್ಸ್, ರೋವರ್ಸ್, ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ‘ಅಭಿನಂದನಾ ಸಮಾರಂಭ’ ಬೆಳ್ತಂಗಡಿ ಸಂತೆಕಟ್ಟೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ 07 ರೇಂಜರ್ಸ್ ವಿದ್ಯಾರ್ಥಿನಿಯರು ಸನ್ಮಾನಿತರಾಗಿ ನಮ್ಮ ವಿಭಾಗಕ್ಕೆ ಹಾಗೂ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.
ವಿದ್ಯಾರ್ಥಿಗಳಿಗೆ ಅಭಿನಂದನೆಗಳು

