ರಾಷ್ಟ ಮಟ್ಟಕ್ಕೆ ಆಯ್ಕೆ

ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ ಪ್ರಥಮ🥇🏆 ಸ್ಥಾನ ಪಡೆದು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.ವಿಜೇತ ತಂಡದ ಎಲ್ಲಾ ಆಟಗಾರರಿಗೆ ಮನದಾಳದ ಅಭಿನಂದನೆಗಳು 💐💐💐

ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾ

ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ನಮ್ಮ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ವಿಭಾಗದ ಬಾಲಕಿಯರ ತಂಡ ಪ್ರಥಮ 🥇ಸ್ಥಾನ ಹಾಗೂ ಪ್ರೌಢಶಾಲಾ ಕನ್ನಡ ಮಾಧ್ಯಮದ 17 ರ ಬಾಲಕಿಯರ ತಂಡ ದ್ವಿತೀಯ 🥈ಸ್ಥಾನ ಪಡೆದು SGFi ರಾಷ್ಟ ಮಟ್ಟದ ವಾಲಿಬಾಲ್ 🏐 ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ. ವಿಜೇತ ತಂಡದ ಹೆಮ್ಮೆಯ ಕ್ರೀಡಾ ಸಾಧಕಿಯರಿಗೆ ಮನದಾಳದ ಅಭಿನಂದನೆಗಳು 💐💐💐🥰

ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ಪ್ರಾರಂಭೋತ್ಸವ ಹಾಗೂ ರೋವರ್ & ರೇಂಜರ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ & ಗೈಡ್ಸ್, ಕರ್ನಾಟಕ ಇದರ ಸಹಾಯಕ ರಾಜ್ಯ ಸಂಘಟನಾ ಆಯುಕ್ತರಾದ ಶ್ರೀ ಭರತ್ ರಾಜ್ ಕೆ ಇವರು ನೆರವೇರಿಸಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ನ ಪಾತ್ರವನ್ನು […]

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ವಿನಯಚಂದ್ರ ಧ್ವಜಾರೋಹಣವನ್ನು ನೆರವೇರಿಸಿ, ಹಿರಿಯರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಪಡೆದುಕೊಂಡ ಸ್ವಾತಂತ್ರ್ಯ ಹಾಗೂ ಅದರ ರಕ್ಷಣೆಯ ಜವಾಬ್ದಾರಿಯನ್ನು ತಿಳಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಎಲ್ಲಾ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಭಾಷಣ, ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಶೈಕ್ಷಣಿಕ ಸಾಧನೆಯನ್ನು ಮಾಡಿದ ಸ್ಕೌಟ್ಸ್, ಗೈಡ್ಸ್, ರೋವರ್ಸ್, ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ‘ಅಭಿನಂದನಾ ಸಮಾರಂಭ’

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇದರ ವತಿಯಿಂದ ದಿನಾಂಕ 20-07-2024ರಂದು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಪಡೆದು ಶೈಕ್ಷಣಿಕ ಸಾಧನೆಯನ್ನು ಮಾಡಿದ ಸ್ಕೌಟ್ಸ್, ಗೈಡ್ಸ್, ರೋವರ್ಸ್, ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ‘ಅಭಿನಂದನಾ ಸಮಾರಂಭ’ ಬೆಳ್ತಂಗಡಿ ಸಂತೆಕಟ್ಟೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ 07 ರೇಂಜರ್ಸ್ ವಿದ್ಯಾರ್ಥಿನಿಯರು ಸನ್ಮಾನಿತರಾಗಿ ನಮ್ಮ ವಿಭಾಗಕ್ಕೆ […]

Saraswathi English Medium School recently hosted an event on June 5th

Saraswathi English Medium School recently hosted an event on June 5th mainly focused on raising awareness about the impact of deforestation on the environment. As part of the initiative, Smt. Sowbhagya provided insightful information to the students about the critical issue of deforestation and its environmental consequences. To further engage students and foster a deeper […]

ಮುಂಡಾಜೆ ಪದವಿ ಪೂರ್ವ ಕಾಲೇಜು: ಪ್ರಥಮ ಪಿಯುಸಿ ಪ್ರಾರಂಭೋತ್ಸವ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಪದವಿಪೂರ್ವ ವಿಭಾಗದ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಕಾರ್ಯಕ್ರಮ ಜೂನ್ 1ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಆಡಳಿತ ವರ್ಗ, ಶಿಕ್ಷಕ ವರ್ಗ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಕಾಲೇಜಿಗೆ ಸಂಭ್ರಮದಿಂದ ಬರಮಾಡಿಕೊಂಡರು. ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ವರ್ಷದ ಶುಭಾರಂಭ ಕೈಗೊಳ್ಳಲಾಯಿತು.ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರರವರು […]

Saraswathi English Medium Shishumandir

Saraswathi English Medium Shishumandir.We’re thrilled to kick off the new academic year 2024-25 with our first day of school at our VEIM campus in Mundaje. this special day as our students embark on a journey of learning, growth, and discovery.